Latest News

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವ್ಯಾಪ್ತಿಯ ಜಿಲ್ಲಾ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿ ಅರ್ಜಿ ಆಹ್ವಾನ

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಪ್ರತಿ ವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳ-2024 ರಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಪ್ರಗತಿ ಪರ ರೈತ/ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಿದ ರೈತ/ರೈತ ಮಹಿಳೆಯರಲ್ಲಿ ಪ್ರತಿ ಜಿಲ್ಲೆಯಿಂದ ಒಬ್ಬ ರೈತ ಮತ್ತು ಒಬ್ಬ ರೈತ ಮಹಿಳೆಯನ್ನು ಆಯ್ಕೆ ಮಾಡಿ, ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು, ಈ ಪ್ರಶಸ್ತಿಯನ್ನು ದಿನಾಂಕ: 18-21 ಅಕ್ಟೋಬರ್-2024 ರಲ್ಲಿ ಜರುಗುವ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಯಶಸ್ವಿ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರು ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ಕೃಷಿ ವಿಜ್ಞಾನ ಕೇಂದ್ರಗಳು ಅಥವಾ ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅರ್ಜಿ ಪಡೆಯಬಹುದು ಅಥವಾ https://www.uahs.edu.in/ ನಲ್ಲಿ ಲಭ್ಯವಿರುವ ಅರ್ಜಿ ತೆಗೆದುಕೊಂಡು ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 15 ನೇ ಆಗಸ್ಟ್-2024 ರ ಒಳಗೆ ತಲುಪುವಂತೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ವಿಜ್ಞಾನಿ ಮತ್ತು
ಮುಖ್ಯಸ್ಥರುಗಳು, ಕೃಷಿ ವಿಜ್ಞಾನ ಕೇಂದ್ರ ಇವರನ್ನು ಸಂಪರ್ಕಿಸಬೇಕಾದ ಸಂಖ್ಯೆಗಳು: ಶಿವಮೊಗ್ಗ- 94808 38976, 8277932600, ದಾವಣಗೆರೆ-9480838209, ಚಿಕ್ಕಮಗಳೂರು- 9480838203, 8277930890, ಉಡುಪಿ-9480838202, 8277932500, ಚಿತ್ರದುರ್ಗ-9480838201, ದಕ್ಷಿಣ ಕನ್ನಡ- 8794706468, 8277931060, ಮಡಿಕೇರಿ- 94808 38210, 7259005540

Application Form-2024

Scroll to Top